“Book Descriptions: ‘ಹೊಕ್ಕಳ ಮೆದುಳು’ ಡಾ.ಕೆ.ಎನ್. ಗಣೇಶಯ್ಯ ಅವರ ಕಥಾಂಬರಿ. ನ್ಯೂಯಾರ್ಕ್‌ನಲ್ಲಿ ಆಯೋಜಿಸಿದ್ದ 'ವಿಜ್ಞಾನ, ಧರ್ಮ ಮತ್ತು ಆಧ್ಯಾತ್ಮಿಕತೆ' ಎಂಬ ಅಂತಾರಾಷ್ಟ್ರೀಯ ಕಮ್ಮಟದಲ್ಲಿ ಭಾಗವಹಿಸಿಲು ಆಹ್ವಾನಿತಗೊಂಡಿದ್ದ ಭಾರತದ ಧರ್ಮಗುರುಗಳು ಅಚ್ಚರಿಯ ವಿದ್ಯಮಾನವೊಂದಕ್ಕೆ ಸಾಕ್ಷಿಯಾಗುತ್ತಾರೆ. ಅಲ್ಲಿನ ಮಾನಸಿಕ ಆಸ್ಪತ್ರೆಯಲ್ಲಿ ನಡೆದ ದುರಂತವೊಂದಕ್ಕೆ ಇಂದಿನ ನ್ಯಾಯಪದ್ಧತಿಯ ಆವರಣದಲ್ಲಿ ಸೂಕ್ತ ಮತ್ತು ಸಿದ್ಧ ಪರಿಹಾರ ಸಿಗದ ಕಾರಣ, ವಿಜ್ಞಾನಿಗಳ, ನ್ಯಾಯಪಾಲಕರ ಮತ್ತು ಧರ್ಮಗುರುಗಳ ನಡುವೆ ಒಂದು ಜಾಗತಿಕ ಚರ್ಚೆಯನ್ನು ಏರ್ಪಡಿಸಲಾಗಿರುತ್ತದೆ. ಮಾನಸಿಕ ಸ್ಥಿತಿಯಲ್ಲಾಗುವ ಪಲ್ಲಟಗಳ ಬಗ್ಗೆ ನಡೆದ ಈ ಚರ್ಚೆಯಲ್ಲಿ ಎದುರಾಗುವ ಗೊಂದಲಗಳ ಮತ್ತು ಸವಾಲುಗಳ ಮೂಲಕ ಆಸ್ಪತ್ರೆಯಲ್ಲಿ ನಡೆದ ದುರಂತವೊಂದರ ವಿವರಗಳು ಅನಾವರಣಗೊಳ್ಳುವ ಕುತೂಹಲಕಾರಿ ಕಥನ ಇಲ್ಲಿದೆ.” DRIVE