“Book Descriptions: ಜೀವವಿಕಾಸದ ತತ್ವಗಳನ್ನು ಅನ್ವೇಷಿಸುವುದು ಇವರ ಮತ್ತೊಂದು ಸಂಶೋಧನಾಸಕ್ತಿ. 'ಭಿನ್ನಬಿಂಬ' ಕೃತಿಯ ಹಿನ್ನಲೆಯಲ್ಲಿ ಮುಖ್ಯವಾಗಿ ಕೆಲಸ ಮಾಡಿರುವುದು ಅವರ ಈ ಬಗೆಯ ಪ್ರವೃತ್ತಿಯೇ. ಜೊತೆಗೆ ಧರ್ಮ ವಿಜ್ಞಾನಗಳನ್ನು ಕುರಿತ ತೌಲನಿಕ ಚರ್ಚೆ ಇಲ್ಲಿದೆ. ಚರಿತ್ರೆಯ ವಿಸ್ಮೃತಿಯ ಪರಿಣಾಮಗಳೇನೆಂಬುದನ್ನು ಅತ್ಯಂತ ಕುತೂಹಲದ ಧಾಟಿಯಲ್ಲಿ ನಿರೂಪಿಸುವ 'ನಿಧಿಯ ಅವತರಣೆ' ಲೇಖನವಿದೆ. ಎಲ್ಲ ಲೇಖನಗಳು ಓದುಗರನ್ನು ಆಲೋಚನೆಗೆ ಹಚ್ಚುವಷ್ಟು ಪರಿಣಾಮಕಾರಿಯಾಗಿವೆ.
ವಿಜ್ಞಾನ, ಚರಿತ್ರೆ, ಧರ್ಮಗಳ ಮುಖಾಮುಖಿಯಲ್ಲಿ ತಿಳಿದುಕೊಳ್ಳಬೇಕಾದ ಸತ್ಯದ ಅನಾವರಣನ್ನು ಇಲ್ಲಿನ ಲೇಖನಗಳು ಮಾಡುತ್ತವೇ. ಇಂಗ್ಲಿಷ್‌ನಲ್ಲಿ ಅನೇಕ ಸಂಶೋಧನಾ ಲೇಖನಗಳನ್ನು ಬರೆದಿರುವ ಗಣೇಶಯ್ಯ ಅವರ ಮೊದಲ ಆ ಸ್ವರೂಪದ ಕನ್ನಡದ ಕೃತಿ ಭಿನ್ನಬಿಂಬ.” DRIVE